ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ರಾವ್ ಗೆ ಬಿಜೆಪಿಯಿಂದ ಶ್ರದ್ದಾಂಜಲಿ
23/04/2025, 11:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಗೆ
ಮೃತಪಟ್ಟ ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಅವರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ನಗರದ ಆಶೀರ್ವಾದ ಸರ್ಕಲ್ ನಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಿದರು. ಉಗ್ರಗಾಮಿಗಳಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಧಿಕ್ಕಾರ ಕೂಗಿದರು.
ಮಂಜುನಾಥ್ ರಾವ್ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಣಿಮಕ್ಕಿಯವರು.