10:28 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್

11/05/2026, 22:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarkarnataka@gmail.com

ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಅದೃಷ್ಟವಶಾತ್ ಈ ಅವಘಡ ಬಸ್ ನಿಲ್ದಾಣದೊಳಗೆ ಸಂಭವಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇದೇ ಘಟನೆ ರಸ್ತೆ ಮಧ್ಯೆ ನಡೆದಿದ್ದರೆ ಗಂಭೀರ ಅಪಾಯ ಸಂಭವಿಸುವ ಸಾಧ್ಯತೆ ಇತ್ತು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಬಸ್‌ಗಳ ನಿರ್ವಹಣಾ ಸ್ಥಿತಿಗತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಬಸ್‌ಗಳ ತಾಂತ್ರಿಕ ಪರಿಶೀಲನೆ ಮತ್ತು ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು