4:08 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ

04/06/2026, 22:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿಂಸೆ ಗ್ರಾಮದಲ್ಲಿ ಕೆಫೆ ಕಾರ್ಮಿಕನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ.
ನೇಪಾಳ ಮೂಲದ ಕೆಫೆ ಕಾರ್ಮಿಕ ಬಾಬುರಾಮ್ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಹರ್ಷ ಹಾಗೂ ಆತನ ಸ್ನೇಹಿತ ಶಶಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಹರ್ಷ ಎನ್.ಆರ್.ಪುರದಲ್ಲಿ ಎಲೆಕ್ಟ್ರಿಷಿಯನ್ ಗುತ್ತಿಗೆದಾರನಾಗಿದ್ದು, ರಾತ್ರಿ 10.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿಕೊಂಡು ಬಾಬುರಾಮ್ ಅವರನ್ನು ಕರೆಸಿಕೊಂಡಿದ್ದಾನೆ ಎನ್ನಲಾಗಿದೆ.
ಬಾಬುರಾಮ್ ತಡವಾಗಿ ಬಂದಿದ್ದಕ್ಕೆ ಆಕ್ರೋಶಗೊಂಡ ಆರೋಪಿಗಳು ಕೆಫೆಗೆ ನುಗ್ಗಿ, “ಕರೆದ ಕೂಡಲೇ ಬರಲು ಆಗಲ್ವಾ?” ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಘಟನೆ ನಡೆದ ಕೆಫೆಯಲ್ಲಿ ಟೇಬಲ್ ಅಥವಾ ಕಾರಿಗೆ ಸರ್ವಿಸ್ ವ್ಯವಸ್ಥೆ ಇಲ್ಲದೇ, ಸೆಲ್ಫ್ ಸರ್ವಿಸ್ ವ್ಯವಸ್ಥೆ ಮಾತ್ರ ಇದೆ ಎನ್ನಲಾಗಿದೆ.


ಗಲಾಟೆ ನಡೆಯುತ್ತಿದ್ದ ವೇಳೆ ಕೆಫೆ ಮಾಲೀಕರು ಸ್ಥಳಕ್ಕೆ ಬಂದರೂ, ಕನ್ನಡ ಭಾಷೆ ಬಾರದ ಬಾಬುರಾಮ್ ಮೇಲೆ ಹಲ್ಲೆ ಮುಂದುವರಿದಿದೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ 112ಕ್ಕೆ ಕರೆ ಮಾಡಿದ ಕೆಫೆ ಮಾಲೀಕರಿಗೂ ಆರೋಪಿಗಳು ಬೆದರಿಕೆ ಹಾಕಿದ್ದು, “ಎಫ್‌ಐಆರ್ ಮಾಡಿಸು, ನೋಡಿಕೊಳ್ಳುತ್ತೇನೆ” ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಬಾಬುರಾಮ್ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ರಕ್ತಸ್ರಾವದೊಂದಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು