4:25 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು

27/10/2025, 17:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರುವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಮಳೆ ಹಾಗೂ ತೀವ್ರ ತಿರುವಿನ ನಡುವೆಯೇ ನಡೆದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು, ಚಾರ್ಮಾಡಿ ಘಾಟಿಯ ಅಣ್ಣಪ್ಪಸ್ವಾಮಿ ದೇಗುಲದ ಡೌನ್‌ ಹತ್ತಿರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ರಸ್ತೆಯ ಮತ್ತೊಂದು ಬದಿಗೆ ಬಿದ್ದಿದ್ದು, ಅಲ್ಪ ಅಂತರದಷ್ಟರಲ್ಲಿ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾರ್ಮಾಡಿ ಘಾಟಿ ಮಾರ್ಗವು ಬೆಟ್ಟ-ಗುಡ್ಡಗಳು, ಪ್ರಪಾತಗಳು ಹಾಗೂ ತೀವ್ರ ತಿರುವುಗಳಿಂದ ಕೂಡಿದ್ದು, ಮಳೆಯಾದಾಗ ಚಾಲನೆ ಅತ್ಯಂತ ಎಚ್ಚರಿಕೆಯಿಂದ ಮಾಡಬೇಕಾಗಿದೆ.
ಘಟನೆ ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು