2:15 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ನಾಮಪತ್ರ ಸಲ್ಲಿಕೆ: ಪಾದಯಾತ್ರೆಯುದ್ಧಕ್ಕೂ ಹಿರಿಯರ ಕಾಲಿಗೆ ನಮಸ್ಕಾರ

17/04/2023, 16:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ‌ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ಪತ್ನಿ ಪಲ್ಲವಿ, ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ವೆಂಕಟೇಶ್ ಜತೆಗಿದ್ದರು. ಚಿಕ್ಕಮಗಳೂರು ಚುನಾವಣಾ ಅಧಿಕಾರಿ ಕಿಶೋರ್ ಕುಮಾರ್ ಗೆ ರವಿ ನಾಮಪತ್ರ ಸಲ್ಲಿಸಿದರು.
3000ಕ್ಕೂ ಅಧಿಕ ಕಾರ್ಯಕರ್ತರ ಜೊತೆ ಶಾಸಕ ಸಿ.ಟಿ. ರವಿ ನಾಮಪತ್ರ ಸಲ್ಲಿಕೆಗೆ ತೆರಳಿದರು.
ನಾಮಪತ್ರ ಸಲ್ಲಿಕೆಯ ಮುನ್ನ ಕಾಮಧೇನು ಗಣಪತಿ ದೇವಸ್ಥಾನ ಹಾಗೂ ಸ್ವಗ್ರಾಮ ಚಿಕ್ಕಮಾಗವಳ್ಳಿ ಗ್ರಾಮದೇವತೆಗೆ ಪೂಜೆ ಸಲ್ಲಿಸಿದರು.
ರಸ್ತೆಯುದ್ಧಕ್ಕೂ ಸಿ.ಟಿ.ರವಿಗೆ ಹಾರ ಹಾಕಿ ಜನರು ಶುಭ ಕೋರಿದರು. ರಸ್ತೆಯುದ್ಧಕ್ಕೂ ಹಿರಿಯರ ಕಾಲಿಗೆ ಬಿದ್ದು ರವಿ ಆಶೀರ್ವಾದ ಪಡೆದರು.
ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಎಂದು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು