ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು
24/03/2025, 09:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಮಳೆಗೆ
ಕುರುಬರಹಳ್ಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಮಹಿಳೆಯನ್ನು ತಿಮ್ಮನಹಳ್ಳಿಯ ನಾಗಮ್ಮ(65) ಎಂದು ಗುರುತಿಸಲಾಗಿದೆ.
ಸಿಡಿಲು ಬಡಿದು ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಮಧ್ಯಾಹ್ನ ವೇಳೆ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ.
ಮಗಳ ಮನೆಗೆ ಶುಂಠಿ ನೆಡಲು ಬಂದಿದ್ದ ನಾಗಮ್ಮ ದಂಪತಿ ಆಗಮಿಸಿದ್ದರು. ಇಂದು ಬೆಳಗ್ಗೆ ಅತ್ತೆ-ಮಾವನನ್ನ ಅಳಿಯನೇ ಹೋಗಿ ಕರೆದುಕೊಂಡು ಬಂದಿದ್ದರು. ಗದ್ದೆಯಲ್ಲಿ ಒಟ್ಟು 12 ಜನ ಕೆಲಸ ಮಾಡುತ್ತಿದ್ದರು.
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು