3:39 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ ವ್ಯಾಘ್ರ

06/05/2025, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದೆ. ಕಾಡಾನೆ, ಕಾಡುಕೋಣಗಳ ಉಪಟಳದ ನಡುವೆ ಇದೀಗ ಮೂಡಿಗೆರೆ ಪಟ್ಟಣದ ಸಮೀಪವೇ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಕುನ್ನಹಳ್ಳಿ ಗ್ರಾಮದಲ್ಲಿ ಹುಲಿದಾಳಿಗೆ ಹಸು ಬಲಿಯಾಗಿದೆ. ಕುನ್ನಹಳ್ಳಿ ಗ್ರಾಮದ ಕೃಷಿಕ ಹಳೇಮೂಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್.ಶಿವಾನಂದ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ಹಸುವೊಂದರ ಕಳೆಬರ ಪತ್ತೆಯಾಗಿತ್ತು. ಪರಿಶೀಲಿಸಲಾಗಿ ಅದು ಗ್ರಾಮದ ಕೆ.ಸಿ.ಪ್ರದೀಪ್ ಎಂಬುವವರ ಸಿಂಧಿ ಹಸುವಾಗಿತ್ತು. ಸ್ಥಳದಲ್ಲಿ ಹುಲಿ ಹೆಜ್ಜೆ ಹೋಲುವ ಗುರುತುಗಳು ಕಂಡಬಂದಿದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಮೂಡಿಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶುಸಂಗೋಪನಾ ಇಲಾಖೆ ವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದಾಗ ಇದು ಹುಲಿ ಹೆಜ್ಜೆ ಎಂಬುದು ಖಚಿತವಾಗಿದ್ದು, ಹುಲಿದಾಳಿಯಿಂದ ಹಸು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಹಸುವಿನ ಕುತ್ತಿಗೆ ಭಾಗದಲ್ಲಿ ಹುಲಿದಾಳಿ ಮಾಡಿರುವ ಗುರುತು ಪತ್ತೆಯಾಗಿದೆ. ಪಶುಸಂಗೋಪನಾ ಇಲಾಖೆ ವೈದ್ಯರು ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಸ್ಥಳದಲ್ಲಿ ಅರಣ್ಯ ಇಲಾಖೆ ವತಿಯಿಂದ ಕ್ಯಾಮರಾ ಅಳವಡಿಸಿದ್ದು, ಹುಲಿಯ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮೂಡಿಗೆರೆ ಆರ್ ಎಫ್ ಒ ಕಾವ್ಯ, ಡೆಪ್ಯುಟಿ ಆರ್.ಎಫ್.ಒ ಅಶ್ವಥ್, ಬೀಟ್ ಫಾರೆಸ್ಟ್ ಸುಮಂತ್, ಶಿವಶಂಕರ್, ಗ್ರಾಮದ ಮುಖಂಡ ರವಿ ಕುನ್ನಹಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಈ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಭಾಗ ಹೆಚ್ಚಿನ ಜನವಸತಿ ಪ್ರದೇಶವಾಗಿದ್ದು, ಕೃಷಿಕರು ಮತ್ತು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ತೋಟದ ಮಾಲೀಕರು ಮತ್ತು ಕಾರ್ಮಿಕರು ಜಮೀನುಗಳಿಗೆ ತೆರಳಲು ಭಯಪಡುವಂತಾಗಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮವಹಿಸಿ ಹುಲಿಯನ್ನು ಪತ್ತೆಹಚ್ಚಿ ಸೆರೆಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು