ಇತ್ತೀಚಿನ ಸುದ್ದಿ
Chikkamagaluru | ಪರೀಕ್ಷೆಯಲ್ಲಿ ಫೇಲಾಗುವ ಭಯ: ನರ್ಸಿಂಗ್ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು
14/11/2026, 15:08
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಪರೀಕ್ಷೆಯಲ್ಲಿ ಫೇಲಾಗುವ ಭಯ, ನರ್ಸಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.
ನಾಪತ್ತೆಯಾಗಿದ್ದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯ
ರಕ್ಷಿತ್ (19) ಎಂಬಾತನ ಶವ ಪತ್ತೆಯಾಗಿದೆ.
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿಚಿಕ್ಕಮಗಳೂರಿನ ಸರ್ಕಾರಿ ವೃತ್ತಿಪರ ಕಾಲೇಜಿನ ಬಾಲಕರ ನಿಲಯದಿಂದ ರಕ್ಷಿತ್ ನವೆಂಬರ್ 7ರಂದು
ನಾಪತ್ತೆಯಾಗಿದ್ದ.
ಚಿಕ್ಕಮಗಳೂರು ನಗರದ ಹೊರವಲಯ ಜಿಪಂ ಸಮೀಪದ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿದೆ.
ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಕ್ಷಿತ್ ಮೂಲತಃ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ನಿವಾಸಿ. ಸ್ನೇಹಿತನ ಬಳಿ ಪರೀಕ್ಷೆಯಲ್ಲಿ ಫೇಲಾಗುತ್ತೇನೆ ಎಂದು ಹೇಳಿದ್ದನಂತೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.













