3:29 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

Chikkamagaluru | ಜನಾಕ್ರೋಶಕ್ಕೆ ಬೆದರಿದ ಸರಕಾರ: ನಾಲ್ಕೇ ದಿನಗಳಲ್ಲಿ ಕಾಡಾನೆ ಸೆರೆಗೆ ಮತ್ತೆ ಕಾರ್ಯಾಚರಣೆ

04/08/2025, 12:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿಗರ ಆಕ್ರೋಶಕ್ಕೆ ಮತ್ತೊಮ್ಮೆ ಬೆದರಿದ ಸರ್ಕಾರ ನಾಲ್ಕೇ ದಿನಕ್ಕೆ ಮತ್ತೆ ಕುಮ್ಕಿ ಆನೆಗಳನ್ನ ಕರೆಸಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಮುಂದಾಗಿದೆ.


ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ 4 ದಿನದಲ್ಲಿ ಇಬ್ಬರನ್ನ ಬಲಿ ಪಡೆದಿತ್ತು. ಮಲೆನಾಡಿಗರ ತಾಳ್ಮೆಯ ಕಟ್ಟೆ ಒಡೆದಿತ್ತು. ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಂಗಮೇಶ್ವರಪೇಟೆ ಅರಣ್ಯ ಇಲಾಖೆ ಹಾಗೂ ಜಿಲ್ಲಾಧಿಕಾರಿ ಕಾರಿಗೂ ಕೂಡ ಮುತ್ತಿಗೆ ಹಾಕಿದ್ದರು. ಗಂಟೆಗಟ್ಟಲೇ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಜನರ ಆಕ್ರೋಶಕ್ಕೆ ಬೆದರಿದ ಸರ್ಕಾರ ಪ್ರತಿಭಟನೆ ನಡೆಯುತ್ತಿರುವಾಗಲೇ ಸ್ಥಳಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ 2 ಆನೆ ಸೆರೆ ಹಿಡಿಯುತ್ತೇವೆ ಎಂದಿದ್ರು. ಆದರೆ, ಕುಮ್ಕಿ ಆನೆಗಳು ಒಂದು ಪುಂಡಾನೆಯನ್ನ ಸೆರೆ ಹಿಡಿಯುತ್ತಿದ್ದಂತೆ ಕುಮ್ಕಿ ಆನೆಗಳು ಲಾರಿ ಹತ್ತಿದ್ವು. ಜನ ಹೇಳಿದ್ದು ಮೂರು ಆನೆ. ಸರ್ಕಾರದ ಹೇಳಿದ್ದು ಎರಡು ಆನೆ. ಆದರೆ, ಒಂದು ಆನೆ ಸೆರೆ ಹಿಡಿದು ಕುಮ್ಕಿ ಆನೆಗಳು ವಾಪಸ್ ಹೋಗಿದ್ದಕ್ಕೆ ಜನ ಮತ್ತೊಮ್ಮೆ ಹೋರಾಟದ ಬಗ್ಗೆ ಚಿಂತಿಸ ತೊಡಗಿದ್ದರು. ಇದರ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ ಖಂಡ್ರೆ ಕಾಡಾನೆ ಸೆರೆಗೆ ಮತ್ತೆ ಅನುಮತಿ ನೀಡಿರೋದ್ರಿಂದ ಬಿಡಾರಕ್ಕೆ ವಾಪಸ್ ಹೋಗಿದ್ದ ಕುಮ್ಕಿ ಆನೆಗಳು ಮತ್ತೆ ವಾಪಸ್ ಬಂದಿವೆ. ಇಂದಿನಿಂದ ಮೂವರನ್ನ ಎನ್.ಆರ್.ಪುರದ ಮುತ್ತಿನಕೊಪ್ಪ ಗ್ರಾಮದಲ್ಲಿ ಕಾಡಾನೆ ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ, ಒಮ್ಮೆ ಕುಮ್ಕಿ ಆನೆಗಳನ್ನ ತಂದು-ತಗೆದುಕೊಂಡು ಹೋಗಲು ಲಕ್ಷಾಂತರ ಖರ್ಚು ಬರುತ್ತೆ. ಅಧಿಕಾರಿಗಳು-ಸರ್ಕಾರ 3-4 ದಿನಕ್ಕೆ ಆನೆಗಳನ್ನ ಸಾಗಾಟ ಮಾಡ್ತಿರೋದು ಸರ್ಕಾರದ ಬೊಕ್ಕಸಕ್ಕೆ ನಷ್ಟವಲ್ಲವೇ ಎಂದು ಜನ ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು