ಇತ್ತೀಚಿನ ಸುದ್ದಿ
Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಹರಿಹರಪುರ ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ನೀರು
05/04/2025, 00:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿವೆ.
ಕೊಪ್ಪ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮ ದೇವರಮನೆಗುಡ್ಡ ಪರಿಸರದ ಮನೆಗಳಿಗೆ ನೀರು ನುಗ್ಗಿವೆ.
ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಲೇ ಮನೆಯೊಳಗೆ ನೀರು
ನುಗ್ಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹರಿಹರಪುರ ಗ್ರಾಮಸ್ಥರು ಇಡೀ ರಾತ್ರಿ ಜಾಗರಣೆ ಇದ್ದು, ಮನೆಯಿಂದ ನೀರು ಹೊರಹಾಕಿದ್ದಾರೆ.
ಪ್ರತಿ ವರ್ಷ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಚರಂಡಿಗಳು ಮುಚ್ಚಿ ಹೋಗಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ.
ಬೆಳಗ್ಗೆ ಇಡೀ ಮನೆ ಶುಚಿ ಮಾಡೋದು, ಸಂಜೆ ಮಳೆ ಬಂದ್ರೆ ಮತ್ತದೇ ಪರಿಸ್ಥಿತಿ ಎಂದು ಗ್ರಾಮಸ್ಥರು ಹೇಳುತ್ತರೆ.