7:19 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

25/08/2026, 19:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು-ಮೂಡಿಗೆರೆ ತಾಲೂಕಿನ ನೂರಾರು ಮಂದಿ ಬಿಜೆಪಿ-ಭಜರಂಗದಳ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಮುಖಂಡ ವಿಜಯ್ ಕುಮಾರ್ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿದೆ.
ಇನ್ನೂ 200ಕ್ಕೂ ಅಧಿಕ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರಲಿದ್ದಾರೆ.
2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಜಯ್ ಕುಮಾರ್ ಜೆಡಿಎಸ್ ಗೆ ಸೇರಿದ್ದಾರೆ.
ಕಟ್ಟರ್ ಹಿಂದೂವಾದಿ, ಭಜರಂಗದಳ ಮಾಜಿ‌ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಕೂಡ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ತೆಕ್ಕೆಗೆ ಸೇರಿದ್ದಾರೆ.
ಬಿಜೆಪಿ ಯುವ ಮೋರ್ಚಾದ ಮಂಡಲ ಹಾಗೂ ವಿವಿಧ ಹಂತದ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ನಾಳೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕೈ-ಕಮಲ ತೊರೆದು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.ಮಾಜಿ ಸಿಎಂ ಕುಮಾರಸ್ವಾಮಿ, ನಿಖಿಲ್, ಭೋಜೇಗೌಡ ನೇತೃತ್ವದಲ್ಲಿ ಜೆಡಿಎಸ್ ಸೇರಲಿದ್ದಾರೆ.
ನಾಳೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ 500ಕ್ಕೂ ಅಧಿಕ ಕಾರ್ಯಕರ್ತರು ತೆರಳಿದ್ದಾರೆ. 200ಕ್ಕೆ ಅಧಿಕ‌ ಕಾರ್ಯಕರ್ತರು ಜೆಡಿಎಸ್ ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ ಸೇರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು