ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಗಾಳಿ ಮಳೆ: ಓಮ್ನಿ ಮೇಲೆ ಬಿದ್ದ ಮರ; ಶೃಂಗೇರಿ ರಸ್ತೆ ಬಂದ್
23/05/2023, 20:36
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka e-mail.com
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಕಳಸ, ಶೃಂಗೇರಿ, ಕೊಪ್ಪ, ಜಯಪುರ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ಶೃಂಗೇರಿ ಸಮೀಪ ನಿಂತಿದ್ದ ಓಮ್ನಿ ಕಾರಿಗೆ ಮರ ಬಿದ್ದು ಹಾನಿಗೀಡಾಗಿದೆ.
ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾರೀ ಮಳೆಯಾಗಿದ್ದು, ಗುಡುಗು-ಸಿಡಿಲ ಮಳೆ ಕಂಡು ಜನರು ಭಯಭೀತರಾಗಿದ್ದಾರೆ. ಶೃಂಗೇರಿಯಲ್ಲಿ ಕೂಡ ಅಬ್ಬರದ ಗಾಳಿ ಮಳೆ ಸುರಿದಿದೆ.
ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ಹಾನಿಗೀಡಾಗಿದೆ. ತೋಟಕ್ಕೆ ಜನರನ್ನ ಕರೆದೊಯ್ಯುವ ಓಮ್ನಿ ಕಾರು ಇದಾಗಿದೆ.
ಮಧ್ಯಾಹ್ನ ಊಟಕ್ಕೆ ಬಂದಿದ್ದರಿಂದ ಕಾರಿನಲ್ಲಿ ಯಾರೂ ಇರಲಿಲ್ಲ. ಕಾರಿನ ಮೇಲೆ ಮರ ಬಿದ್ದಿದ್ದರಿಂದ ಶೃಂಗೇರಿ-ಚಿಕ್ಕಮಗಳೂರು ರಸ್ತೆ ಕೆಲ ಬಂದ್ ಆಗಿದೆ. ಕಾರಿನಲ್ಲಿ ಜನ ಇದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಕಟ್ಟಡ ಗುತ್ತಿಗೆದಾರ ಪ್ರದೀಪ್ ಎಂಬುವರಿಗೆ ಸೇರಿದ ಕಾರು ಇದಾಗಿದೆ.