1:01 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ ಜೀಪ್ ಪತ್ತೆ; ಚಾಲಕನ ಕುರುಹು ಅಲಭ್ಯ

25/07/2025, 20:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕಿನ ಕೊಳಮಾಗೆಯಲ್ಲಿ ಜೀಪೊಂದು ಭದ್ರಾ ನದಿಗೆ ಬಿದ್ದು ಚಾಲಕ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸತತ 23 ತಾಸುಗಳ ಕಾರ್ಯಾಚರಣೆ ಬಳಿಕ ಜೀಪ್ ಪತ್ತೆಯಾಗಿದೆ. ಆದರೆ, ಜೀಪ್ ಚಾಲಕನ ಯಾವುದೇ ಕುರುಹು ಪತ್ತೆಯಾಗಿಲ್ಲ.
ಭದ್ರಾ ನದಿಯಲ್ಲಿ ಪತ್ತೆಯಾದ ಪಿಕಪ್ ಜೀಪ್ ನಿನ್ನೆ ಭದ್ರಾ ನದಿಗೆ ಜೀಪ್ ಉರುಳಿದ ಪರಿಣಾಮ ಅವರ ಚಾಲಕ 23ರ ಹರೆಯದ ಶಮಂತ್ ನೀರು ಪಾಲಾಗಿದ್ದ. ಸುದ್ದಿ ತಿಳಿದು ಆತನ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಸತತ 23 ತಾಸುಗಳ ಶೋಧ ಕಾರ್ಯಾಚರಣೆ ಬಳಿಕ
ಜೀಪನ್ನು ಮೇಲಕ್ಕೆತ್ತಲಾಗಿದೆ.
ಆದರೆ ಜೀಪ್ ನಲ್ಲಿ ಚಾಲಕ ಶಮಂತ್‌ ಕುರುಹು ಪತ್ತೆಯಾಗಿಲ್ಲ. ಶಮಂತ್ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ನಿನ್ನೆ ಸಂಜೆ ತಾಯಿ ಹಾಗೂ ಕಾರ್ಮಿಕರನ್ನ ಕರೆದುಕೊಂಡು ಬರಲು ವೇಳೆ ಈ ದುರ್ಘಟನೆ ನಡೆದಿತ್ತು.ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಜೀಪ್ ಉರುಳಿತ್ತು.ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು