6:04 AM Saturday27 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ದುಷ್ಕರ್ಮಿಗಳಿಂದ ವಿಷ; ಸಾವಿರಾರು ಮೀನಿನ ಮಾರಣ ಹೋಮ!

27/03/2025, 14:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿಗೆ ಕಿಡಿಗೇಡಿಗಳು ವಿಷ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಪರಿಣಾಮವಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿದ್ದು, ನದಿಯ ದಡದಲ್ಲಿ ಹಾಗೂ ನೀರಿನ ಮೇಲ್ಮೈಯಲ್ಲಿ ತೇಲುತ್ತಿರುವ ಹೃದಯ ವಿದ್ರಾಹಕ
ದೃಶ್ಯ ಕಂಡುಬಂದಿದೆ.

*ಘಟನೆ ವಿವರ;*
ಮುಂಗಾರು ಪೂರ್ವದಲ್ಲಿ ನದಿಯಲ್ಲಿ ಹಚ್ಚಿಹಾಕಿದ ವಿಷದ ಪರಿಣಾಮ ನೂರಾರು ಮೀನುಗಳು ಮೃತಪಟ್ಟಿವೆ.
2 ಕಿ.ಮೀ. ಪ್ರದೇಶದೊಳಗೇ ಸಾವಿರಾರು ಮೀನುಗಳು ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ.
ಕಿಡಿಗೇಡಿಗಳು ಮೈಲುತುತ್ತು (ನೈಸರ್ಗಿಕ ಅಥವಾ ರಾಸಾಯನಿಕ ವಿಷ) ಬಳಸಿ ಮೀನುಗಳ ಮಾರಣಹೋಮ ನಡೆಸಿದಂತೆ ಅನುಮಾನ ವ್ಯಕ್ತವಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಮೀನುಗಳನ್ನು ಕಡಿಮೆ ಖರ್ಚಿನಲ್ಲಿ ಮಾರಾಟ ಮಾಡಲು ಈ ರೀತಿಯ ಕೃತ್ಯ ಎಸಗಿರುವ ಸಾಧ್ಯತೆ ಇದೆ.
*ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ:*
ಈ ನೀರು ಹಾಸನದ ಗೊರೂರು ಡ್ಯಾಂ ಸೇರುವ ಹೇಮಾವತಿ ನದಿಗೆ ಸೇರುತ್ತದೆ.


ಮಾರ್ಗಮಧ್ಯೆ ಹತ್ತಾರು ಹಳ್ಳಿಗಳ ಜನ ಕುಡಿಯುವ ನೀರಾಗಿ ಈ ನದಿಯನ್ನು ಅವಲಂಬಿಸಿದ್ದಾರೆ.
ವಿಷಯುಕ್ತ ನೀರು ಮಾನವ ಆರೋಗ್ಯಕ್ಕೂ ಅಪಾಯ ಸೃಷ್ಟಿಸಬಹುದಾದ ಕಾರಣ ಸ್ಥಳೀಯರು ಆತಂಕದಲ್ಲಿದ್ದಾರೆ.
*ಸ್ಥಳೀಯರ ಆಗ್ರಹ ಮತ್ತು ಪೊಲೀಸರು ಭದ್ರತೆ:*
ಸ್ಥಳೀಯರು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಹೇಮಾವತಿ ನದಿಯಲ್ಲಿ ಈ ರೀತಿಯ ವಿಷಪ್ರಯೋಗದ ಕೃತ್ಯಗಳು ಪುನರಾವರ್ತೆನೆಯಾಗದಂತೆ ಕಾನೂನು ಕ್ರಮ ವಹಿಸುವಂತೆ ಜನತೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು