11:47 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಮುತ್ತಿಗೆಪುರ ಗ್ರಾಮದಲ್ಲಿ ಕಾಡಾನೆ ದಾಳಿ; ಓರ್ವ ಗಂಭೀರ ಗಾಯ

06/08/2025, 19:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣ ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.
63 ವರ್ಷದ ಫಿಲಿಪ್ ಎಂಬ ವ್ಯಕ್ತಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದಾರೆ. ಮಧ್ಯ ರಾತ್ರಿ ವೇಳೆ ಮನೆಯ ಸಮೀಪ ನಾಯಿ ಬೊಗಳಿದಾಗ ಮನೆ ಸಮೀಪ ಏನೋ ಶಬ್ದವಾಗುತ್ತಿರುವುದನ್ನು ಗಮನಿಸಿ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ.  ಮನೆಯಿಂದ ಹೊರಬಂದ ವೇಳೆ  ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು, ಟ್ರಾಕ್ಟರ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ತನ್ನ ಪತ್ನಿ ಹಾಗೂ ಮಗನೊಂದಿಗೆ ವಾಸವಾಗಿದ್ದಾರೆ. ಇದೀಗ ಅವರು ತೀವ್ರ ಗಾಯಗೊಂಡಿದ್ದು ಮುಂದಿನ ದಿನಗಳಲ್ಲಿ ದುಡಿದು ತಿನ್ನುವುದಕ್ಕೆ ಕಷ್ಟವಾಗಿದೆ. ಆನೆ ದಾಳಿಯಿಂದ ಅವರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.
ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ, ಮಧ್ಯರಾತ್ರಿ ಹೊತ್ತಿಗೆ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಪ್ರಸ್ತುತ ಕಾಡಾನೆಗಳು ಕುನ್ನಹಳ್ಳಿ ಹಳಸೆ ಭಾಗದಲ್ಲಿ ಬೀಡುಬಿಟ್ಟಿದ್ದು, ಕಾಫಿ ತೋಟ, ಶುಂಠಿ ಗದ್ದೆಗಳಿಗೆ ಲಗ್ಗೆ ಇಟ್ಟಿವೆ. ಕುನ್ನಹಳ್ಳಿ ಚಂದ್ರಶೇಖರ್ ಎಂಬುವವರ ಗದ್ದೆಯಲ್ಲಿ ನಾಟಿ ಮಾಡಿದ್ದ ಶುಂಠಿ ಬೆಳೆಯನ್ನು ಸಂಪೂರ್ಣ ತುಳಿದು ನಾಶಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು