ಇತ್ತೀಚಿನ ಸುದ್ದಿ
Chikkamagaluru | ಎನ್.ಆರ್.ಪುರ: ಕಾಡಾನೆ ದಾಳಿ; ಮನೆಗೆ ಮರಳುತ್ತಿದ್ದ ಯುವತಿ ದಾರುಣ ಸಾವು
24/07/2025, 10:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಕಾಡಾನೆ ದಾಳಿಗೆ ಯುವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಅನಿತಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಅನಿತಾ ಅವರು
ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್ ಮನೆಯಲ್ಲಿ ವಾಸವಾಗಿದ್ದರು.
ಕಳೆದ ರಾತ್ರಿ 9 ಗಂಟೆಗೆ ಮನೆಗೆ ಹೋಗುವಾಗ ಆನೆ ದಾಳಿ ಮಾಡಿದೆ. ತೀವ್ರ ಗಾಯಗೊಂಡ ಅವರಿಗೆ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.