ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ
27/03/2026, 19:03
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ತಾಲೂಕಿನ ಮೀಸಲು ಅರಣ್ಯ ಪ್ರದೇಶ
ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿದೆ. ಕಳೆದ 2 ದಿನಗಳಿಂದ ಬೆಂಕಿಯ ಕೆನ್ನಾಲಿಗೆಗೆ ಮೀಸಲು ಅರಣ್ಯ ಸುಟ್ಟು ಕರಕಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಗರದ ಹೌಸಿಂಗ್ ಬೋರ್ಡಿನ ಆರ್ ಟಿಒ ಕಚೇರಿ ಹಿಂಭಾಗದ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.











ಮರದ ಟೊಂಗೆಯಿಂದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ನೆಲದಲ್ಲಿ ಗೂಡು ಕಟ್ಟುವ ಪ್ರಾಣಿ-ಪಕ್ಷಿಗಳು ಸುಟ್ಟು ಕರಕಲಾಗಿವೆ.













