5:32 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಅಪ್ರಾಪ್ತ ಪುತ್ರನ ಎದುರೇ ಅಪ್ಪ- ಅಮ್ಮನ ಭೀಕರ ಹತ್ಯೆಗೈದ ಆರೋಪಿಗೆ ಗಲ್ಲು

13/03/2026, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

8 ವರ್ಷದ ಮಗನ ಎದುರೇ ಮಲಗಿದ್ದ ದಂಪತಿಯ ಅಮಾನುಷವಾಗಿ ಕಡಿದು ಕೊಲೆ ಮಾಡಿದ ಆರೋಪಿಗೆ
ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದೆ.
ಎನ್.ಆರ್.ಪುರದ ಕುಸುಬೂರಿನಲ್ಲಿ 2019ರಲ್ಲಿ ಈ ಭೀಕರ ಕೊಲೆ ನಡೆದಿತ್ತು.
8 ವರ್ಷದ ಮಗನ ಎದುರೇ ಆತನ ಅಪ್ಪ-ಅಮ್ಮನನ್ನು ಗೋವಿಂದಪ್ಪ ಎಂಬಾತ ಭೀಕರವಾಗಿ ಕಡಿದು ಕೊಲೆ ಮಾಡಿದ್ದ. ಕೊಲೆ ಬಳಿಕ ಮಚ್ಚನ್ನ ತೆಂಗಿನಮರದ ಸುಳಿಯಲ್ಲಿ ಆರೋಪಿ ಬಚ್ಚಿಟ್ಟಿದ್ದ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿತ್ತು.
ಆರೋಪಿ ಗೋವಿಂದಪ್ಪನಿಗೆ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆಯ ತೀರ್ಪು ನೀಡಿತ್ತು. ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಗಲ್ಲು ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿದೆ. ಮನೆಗೆ ನುಗ್ಗಿದ ಪ್ರಕರಣಕ್ಕೆ ಸಂಬಂಧ ಐಪಿಸಿ 448 ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ತೀರ್ಪು ನೀಡಿದ್ದಾರೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ವಿರುದ್ಧ ಸರ್ಕಾರಿ ಅಭಿಯೋಜಕಿ ಪಿ.ವೀಣಾ ವಾದ ಮಂಡನೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು