ಇತ್ತೀಚಿನ ಸುದ್ದಿ
Chikkamagaluru | ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ದುರ್ಘಟನೆ: ಕಾಡುಕೋಣ ದಾಳಿಗೆ ಮಹಿಳೆ ಬಲಿ
07/07/2026, 16:49
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆಸಿದೆ.
ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತೋಟದಿಂದ ಆಸ್ಪತ್ರೆಗೆ ತರುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ಕೋಣ ತಿವಿದಿರುವ ಕಾರಣ ಸಾವು ಸಂಭವಿಸಿದೆ.
ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












