ಇತ್ತೀಚಿನ ಸುದ್ದಿ
Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು
01/04/2025, 13:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ವಿದ್ಯುತ್ ಶಾಕ್ ನಿಂದ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ನಡೆದಿದೆ.
ಹಲಸಿನಕಾಯಿ ತಿನ್ನಲು ಹೋಗಿ ಬೃಹತ್ ಕಾಡಾನೆ ಸಾವನ್ನಪ್ಪಿದೆ.
ಅಂದಾಜು 35 ವರ್ಷದ ಆನೆ ವಿದ್ಯುತ್ ಶಾಕ್ ಗೆ ಬಲಿಯಾಗಿದೆ. ತಣಿಗೇಬೈಲು ಅರಣ್ಯ ವ್ಯಾಪ್ತಿಯ ಲಾಲ್ ಬಾಗ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.