11:22 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ

09/03/2026, 19:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಹಸುವನ್ನು ಕಾಡಾನೆಯೊಂದು ತುಳಿದು ಕೊಂದ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಣಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ಕಾಡಂಚಿನ ಗ್ರಾಮದ ಮೇಯುವಾಗ ಕಾಡಾನೆ ದಾಳಿ ನಡೆಸಿದೆ.‌ ಮಾಣಿಮಕ್ಕಿ ಗ್ರಾಮದ ಮಧು ಎಂಬುವರಿಗೆ ಸೇರಿದ ಹಾಲುಕೊಡುವ ಹಸು ಇದಾಗಿದೆ. ಜಮೀನಿನ ಜೊತೆ ಹೈನುಗಾರಿಕೆ ಮೂಲಕ ಮಧು ಬದುಕು ಕಟ್ಟಿಕೊಂಡಿದ್ದರು.
ಸ್ಥಳಕ್ಕೆ ಪಶುವೈದ್ಯರ ಭೇಟಿ ನೀಡಿ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಕಾಡಾನೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಸ್ಥಳಿಯರ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಲ್ದೂರು ವಲಯ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು