ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಅಕ್ರಮ ಮರಳು ಸಾಗಾಟಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಸಾಥ್.?!
11/11/2021, 20:15
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದಿಂದ ಮರಳು ಸಾಗಾಟಕ್ಕೆ ಉಪವಲಯ ಅರಣ್ಯಾಧಿಕಾರಿ ರಮೇಶ್ ಅವರು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಪೂರಕ ಎನ್ನುವಂತೆ ವೀಡಿಯೊವೊಂದು ಲಭ್ಯವಾಗಿದೆ.
ಅರಣಾಧಿಕಾರಿ ಕ್ರಮದ ವಿರುದ್ಧ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಾಟದ ಟ್ರಾಕ್ಟರ್ ಮತ್ತು ಅರಣ್ಯಾಧಿಕಾರಿಯವರ ಜೀಪನ್ನು
ಮಾರ್ಗಮಧ್ಯೆ ವಿಡಿಯೋ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಈ ಕುರಿತು ಜಾಣ ಕುರುಡುತನ ಪ್ರದರ್ಶಿಸಿದ್ದಾರೆ.