5:18 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ; ರಸ್ತೆ ಬಂದ್

18/11/2022, 14:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Info.reporterkarnataka.com

ಚಿಕ್ಕಮಗಳೂರಿನ ಪ್ರಭಾವಿ‌ ಕಾಂಗ್ರೆಸ್ ಮುಖಂಡೆ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐಟಿ ದಾಳಿ ಇಂದೂ ಕೂಡ ಮುಂದುವರೆದಿದೆ. ಸತತ ಎರಡನೇ ದಿನವೂ ಐಟಿ ಅಧಿಕಾರಿಗಳ ಶೋಧ ಮುಂದುವರೆದಿದೆ.


ನಿನ್ನೆಯಿಂದ ದಾಳಿ ನಡೆಯುತ್ತಿದ್ದರು ಕೂಡ ಗಾಯತ್ರಿ ಶಾಂತೇಗೌಡ ಬೆಂಗಳೂರಿನಲ್ಲಿ ಇದ್ದು, ಈವರೆಗೂ ಮನೆಗೆ ಬಂದಿಲ್ಲ. ನಿನ್ನೆ ಗಾಯತ್ರಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಗಾಯತ್ರಿ ನಿವಾಸದ ಮುಂದಿನ ರಸ್ತೆಯನ್ನ ಪೊಲೀಸರು ಕಂಪ್ಲೀಟ್ ಕ್ಲೋಸ್ ಮಾಡಿದ್ದಾರೆ.


ಸಾರ್ವಜನಿಕರು ಓಡಾಡದಂತೆ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಇನ್ನು ಈ ದಾಳಿಯನ್ನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಐಟಿ ಅಧಿಕಾರಿಗಳು ರಾಜಕೀಯ ಪ್ರೇರಿತವಾಗಿ ದಾಳಿ ಮಾಡಿದ್ದಾರೆ.ಭ್ರಷ್ಟಾಚಾರ ವಿರೋಧಿಸಿ ಕಡೂರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ 10ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಸರ್ಕಾರ ಪೊಲೀಸ್ ಹಾಗೂ ಅಧಿಕಾರಿಗಳನ್ನು ಕೈ ಗೊಂಬೆಗಳಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು