ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ದೇವರ ಮನೆ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ
01/04/2022, 23:07
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಟ್ಟಿಗೆಹಾರ ದೇವರಮನೆ ರಸ್ತೆಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ದೇವರಮನೆಗೆ ಹೋಗಿ ಹಿಂದಿರುಗುತ್ತಿದ್ದ ಪ್ರಯಾಣಿಕರೊಬ್ಬರು ಕೂದಲೆಳೆ ಅಂತರದಲ್ಲಿ ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.
ಬಕ್ಕಿ ಗ್ರಾಮದ ಸುರೇಂದ್ರ ಎಂಬುವವರು ಕುಟುಂಬದವರೊಂದಿಗೆ ದೇವರಮನೆ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದವರು ಕಾರಿನ ಹೆಡ್‍ಲೈಟ್ ಆಪ್ ಮಾಡಿ ಕಾರನ್ನು ಕೆಲಕಾಲ ರಸ್ತೆಯಲ್ಲೆ ನಿಲ್ಲಿಸಿಕೊಂಡಿದ್ದಾರೆ. ಕಾಡಾನೆ ಕಾರಿನ ಸಮೀಪವೇ ಬಂದು ಕೆಲ ಕಾಲ ನಿಂತಿದ್ದು ನಂತರ ಕಾಡಿನ ಕಡೆಗೆ ಸಾಗಿದೆ.
ದೇವರ ಮನೆ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಿದ್ದು ರಾತ್ರಿ ಸಮಯದಲ್ಲಿ ಸಂಚರಿಸಲು ಪ್ರಯಾಣಿಕರು ಭಯಪಡುವಂತಾಗಿದೆ. ಕಾಡಾನೆಯಿಂದ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಈ ಬಗ್ಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.