12:32 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಜನವರಿ 9ರ ವರೆಗೆ ಜ್ಞಾನ ವಿಜ್ಞಾನ ಕಲಾ ವೈಭವ ವಸ್ತು ಪ್ರದರ್ಶನ

06/01/2025, 00:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಗರದ ಎಂ.ಎಲ್. ಮಂಜಯ್ಯ ಶೆಟ್ಟಿ ನರಸಿಂಹ ಶೆಟ್ಟಿ ಶಿಕ್ಷಕರ ಶಿಕ್ಷಣ ಕಾಲೇಜಿನಲ್ಲಿ ಜ್ಞಾನ ವಿಜ್ಞಾನ ಕಲಾ ವೈಭವ ವಸ್ತು ಪ್ರದರ್ಶನ ಇಂದಿನಿಂದ ಜನವರಿ 9ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು ಸಿದ್ದತೆಗಳು ಭರದಿಂದ ಸಾಗಿದೆ.
ಮಲೆನಾಡು ವಿದ್ಯಾಸಂಸ್ಥೆ, ಎಂ.ಎಲ್.ಎಮ್.ಎನ್ ಬಿಎಡ್ ಕಾಲೇಜು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ೧ ಅರ್ಥ್, ಪದವಿ ಪೂರ್ವ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಸ್ತು ಪ್ರದರ್ಶನ ನಡೆಯುತ್ತಿದ್ದು ಭಾರತದ ಇತಿಹಾಸ, ಸಂಸ್ಕೃತಿ, ಕಲೆ ಮಹಾನ್ ವ್ಯಕ್ತಿಗಳ ವಿಜ್ಞಾನ, ವಾಸ್ತುಶಿಲ್ಪ, ಸ್ವಾತಂತ್ರ‍್ಯ ಹೋರಾಟಗಾರರ, ಪುರಾತನ ವಸ್ತುಗಳು ಸೇರಿದಂತೆ ಕೀಟಗಳು ಪಶ್ಚಿಮ ಘಟ್ಟಗಳಲ್ಲಿ ಕಾಣಸಿಗುವ ನೂರಕ್ಕೂ ಹೆಚ್ಚು ಕೀಟಗಳು ಪ್ರದರ್ಶನದಲ್ಲಿ ಇರಲಿದ್ದು ೧೫ ರಿಂದ ೨೦ ಸಾವಿರ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ವಸ್ತು ಪ್ರದರ್ಶನ ವೀಕ್ಷಿಸಲಿದ್ದಾರೆ.
ವಸ್ತು ಪ್ರದರ್ಶನಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಜ್ಞಾನಾಸಕ್ತರಿಗೆ ಉಪಯುಕ್ತ ಕಾರ್ಯಕ್ರಮ ಇದಾಗಿದೆ. ಕಾಲೇಜು ಆವರಣದಲ್ಲಿ ವಸ್ತುಗಳನ್ನು ಜೋಡಿಸಿ ವಸ್ತು ಪ್ರದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದ್ದು ಎಂ.ಎಲ್.ಎಂ.ಎನ್ ಬಿಎಡ್ ಕಾಲೇಜಿನ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ.ರಮೇಶ್, ಎಂ.ಎಲ್. ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ ಚೈತನ್ಯ ಭಾರತಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗಣೇಶ್, ೧ ಅರ್ಥ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಭರತ್ ಸಿ.ವಿ, ವಸ್ತು ಸಂಗ್ರಹಕಾರರಾದ ಅಶೋಕ್, ಕೀಟ ತಜ್ಞ ಡಾ.ಅವಿನಾಶ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು