3:19 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿ ಕೃಷಿಕ ದಾರುಣ ಸಾವು

25/01/2025, 21:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ದೂರು ಸಮೀಪ ನಡೆದಿದೆ.
ಅಲ್ದೂರು ಸಮೀಪ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಹೂವೇಗೌಡ ಅವರು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ.
ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.
ಇತ್ತೀಚಿಗಷ್ಟೇ ಹೂವೆಗೌಡರ ಮಗ ಟ್ಯಾಕ್ಟರ್ ಅಪಘಾತದದಿಂದ ಗಂಭೀರ ಗಾಯಗಳಾಗಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ತನ್ನ ಮಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿಯೇ
ತಂದೆ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ಅಸುನೀಗಿದ್ದಾರೆ.
ಮೃತರು ಮಡದಿ, ಮಗ ಸೇರಿದಂತೆ ಅಪಾರ ಬಂಧು ಬಳಗ ಕುಟುಂಬವನ್ನು ಅಗಲಿದ್ದಾರೆ.
ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು