8:21 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ!

11/08/2024, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚರಣೆಗೆ ಇಳಿದಿದೆ.
ಕೇರಳ ದುರಂತರ ಬಳಿಕ ಒತ್ತುವರಿ ತೆರೆವಿಗೆ ಸಚಿವರು
ಆದೇಶ ನೀಡಿದ್ದರು. ಒಂದು ತಿಂಗಳೊಳಗೆ ಒತ್ತುವರಿ ತೆರವು ಗೊಳಿಸುವಂತೆ ಸಚಿವರಿಂದ ಖಡಕ್ ಸೂಚನೆ ಬಂದಿತ್ರು. ಈ ಹಿನ್ನೆಲೆಯಲ್ಲಿ ಕಾಫಿನಾಡಲ್ಲಿ ಅಕ್ರಮ ಅರಣ್ಯ ಒತ್ತುವರಿ ವಿರುದ್ಧ ಇಲಾಖೆ ಕಾರ್ಯಾಚರಣೆಗಿಳಿದಿದೆ.
20 ಎಕರೆ 11 ಗುಂಟೆ ಅರಣ್ಯ ಭೂಮಿ‌ ಒತ್ತುವರಿ ತೆರೆವು ಕಾರ್ಯ ನಡೆದಿದೆ. ವಸ್ತಾರೆ ಗ್ರಾಮದ ಸರ್ವೇ ನಂಬರ್ 368ರಲ್ಲಿ 20 ಎಕರೆ 11 ಗುಂಟೆ ಭೂಮಿ ವಶಪಡಿಸಿಕೊಳ್ಳಲಾಗಿದೆ.


ರಮೇಶ್ ಎಂಬುವರಿಂದ ಮೀಸಲು ಅರಣ್ಯ ಭೂಮಿ ಒತ್ತುವರಿ ನಡೆದಿತ್ತು.ರಮೇಶ್ ಅವರು ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆಸಿದ್ದರುಮ ಇಂದು ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯ ನಡೆಯಿತು.
200ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ‌ ತೆರವು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು