ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ
14/12/2023, 12:33
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಗಮನಹರಿಸಿ.
6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳು ನಿರ್ಬಂಧ ಹೇರಲಾಗಿದೆ.
ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ.
ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ.
ಡಿ. 24, 25, 26ರಂದು ಕಾಫಿನಾಡ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದ್ದು, ಡಿ.26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಸಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಗಿರಿ ಭಾಗದಲ್ಲಿ ಕ್ರಿಸ್ ಮಸ್ ಸೆಲೆಬ್ರೇಷನ್ ಮಾಡೋದಕ್ಕೂ ಸಾಧ್ಯವಿಲ್ಲ.
6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಟೂರಿಸ್ಟ್ ಬ್ಯಾನ್ ಮಾಡಲಾಗಿದೆ. ಡಿ.17ರಿಂದ 26ರವರೆಗೆ ನಡೆಯಲಿರುವ ದತ್ತಜಯಂತಿ ಸಂಭ್ರಮ ನಡೆಯಲಿದೆ.ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹಾಕಲಾಗಿದೆ.