ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ತುಂಬಿ ಹರಿಯುತ್ತಿರುವ ತುಂಗಾ- ಭದ್ರಾ: ಹೆಬ್ಬಾಳೆ ಸೇತುವೆಗೆ ಮುಳುಗಡೆ ಭೀತಿ
27/06/2024, 17:37
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡ ಪಶ್ಚಿಮಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಭೀತಿ ಎದುರಾಗಿದೆ.
ಕುದುರೆಮುಖ ಘಟ್ಟ ಪ್ರದೇಶದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ.ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಉಳಿದಿದೆ.
ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಸಂಪರ್ಕವೂ ಸ್ಥಗಿತಗೊಳ್ಳಲಿದೆ.
ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ತುಂಗಾ ನದಿಯ ಒಳ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ.
ನಿರಂತರ ಮಳೆಯಿಂದ ನಾಡಿನ ಜೀವನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ