ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮರಗಸಿ ಮಾಡುವಾಗ ವಿದ್ಯುತ್ ಶಾಕ್: ಕಾರ್ಮಿಕ ದಾರುಣ ಸಾವು
01/06/2024, 17:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ನಿಂದ ಮರದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಚಂದ್ರಪ್ಪ (45) ಎಂಬವರು ಮೃತಪಟ್ಟಿದ್ದಾರೆ.
ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನ ಕಡಿಯುವಾಗ ದುರ್ಘಟನೆ ನಡೆದಿದೆ.ಮರ ನೇರವಾಗಿ ಬೆಳೆಯಲೆಂದು ಸಿಲ್ವರ್ ಮರಕ್ಕೆ ಮರಗಸಿ ಮಾಡುವುದು ಅನಿವಾರ್ಯವಾಗಿದೆ.
ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ.ಮರದ ಮೇಲಿದ್ದಾಗಲೇ ವಿದ್ಯುತ್ ಪ್ರವಹಿಸಿ ಮರದಲ್ಲೇ ಸಾವನ್ನಪ್ಪಿದ್ದಾರೆ.ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.