8:27 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೆಚ್ಚುತ್ತಿರುವ ಕಾಡಾನೆ ಹಾವಳಿ; 5-6 ಗ್ರಾಮಗಳಿಗೆ 2 ಡಜನ್ ಸಲಗ ಲಗ್ಗೆ

03/02/2024, 15:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್, ಮೈಕ್ ಅನೌನ್ಸ್ ಮೆಂಟ್ ಮಾಡಲಾಗುತ್ತಿದೆ.


ತೋರಣಮಾವು ಗ್ರಾಮಕ್ಕೆ ಬೀಟಮ್ಮ ಟೀಮ್ ಲಗ್ಗೆಯಿಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದಿರಲು ಅನೌನ್ಸ್ ಮಾಡುತ್ತಿದೆ. ಅನಾವಶ್ಯಕವಾಗಿ ರಸ್ತೆ ಗಿಳಿಯದಂತೆ ಎಚ್ಚರಿಕೆ ನೀಡುತ್ತಿದ್ದಾರೆ. ಬೆಳಗ್ಗೆ ಬೇಗನೆ ಕಾರ್ಮಿಕರು ಕಾಫಿ ತೋಟಕ್ಕೆ ಹೋಗದಿರಲು ಸೂಚನೆ ನೀಡಲಾಗಿದೆ.


ಯಾವುದೇ ಸಮಯದಲ್ಲಿ ಕಾಫಿ ತೋಟಕ್ಕೆ ನುಗ್ಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಳ್ಳಿಗಳನ್ನು ಸುತ್ತಿ
ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚನೆ ನೀಡುತ್ತಿದ್ದಾರೆ.
ಐದಾರು ಗ್ರಾಮಗಳ ವ್ಯಾಪ್ತಿಯಲ್ಲಿ 24 ಆನೆಗಳ ಸಂಚಾರ ಮಾಡುತ್ತಿವೆ ಎಂದು ಅಂದಾಜಿಸಲಾಗಿದೆ. ತೋರಣ ಮಾವು, ಕೋಡುವಳ್ಳಿ, ಗೌತಮೇಶ್ವರ, ಅಣೂರು, ದಿಣ್ಣೆಕೆರೆ ಗ್ರಾಮಗಳಲ್ಲಿ ಕಾಡಾನೆಗಳ ಆತಂಕ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು