ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ನರಹಂತಕ ಕಾಡಾನೆಗಳ ಸೆರೆಗೆ ಆದೇಶ; ರೇಡಿಯೊ ಕಾಲರ್ ಅಳವಡಿಕೆಗೆ ಸೂಚನೆ
25/11/2023, 09:45
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterjarnataka@gmail.com
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ ನೀಡಲಾಗಿದೆ.
ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಲಿದೆ. ಮಲೆನಾಡು ಭಾಗದಲ್ಲಿ 2 ತಿಂಗಳ ಅವಧಿಯಲ್ಲಿ ಒಂಟಿ ಸಲಗ
ಮೂವರನ್ನು ಬಲಿ ಪಡೆದಿದೆ.
ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಪ್ರದೇಶದ
ಜನರು ತತ್ತರಿಸಿ ಹೋಗಿದ್ದಾರೆ.
ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆಯಲ್ಲಿ ಆನೆ ಸೆರೆಹಿಡಿಯಲು ಆದೇಶ ಹೊರಡಿಸಲಾಗಿದೆ. ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚನೆ ನೀಡಲಾಗಿದೆ. ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಯಲಿದೆ.