ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮುಂದುವರಿದ ಸಲಗ ದಾಳಿ; ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವು
03/09/2023, 14:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಚಿಕ್ಕಮಗಳೂರಿನ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಸಲಗ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಳೆದ 2 ವರ್ಷದಲ್ಲಿ 6ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಮೃತಪಟ್ಟವರನ್ನು ದುರ್ಗಾ ಕಿನ್ನಿ (60) ಎಂದು ಗುರುತಿಸಲಾಗಿದೆ.
ಅರೆನೂರು-ಕಂಚುಕಲ್ ದುರ್ಗಾ ರಸ್ತೆಯ ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುವಾಗ ಆನೆ
ಏಕಾಏಕಿ ದಾಳಿ ನಡೆಸಿದೆ.
ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಆಲ್ದೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.