ಇತ್ತೀಚಿನ ಸುದ್ದಿ
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬೆಂಕಿ: ಗೋಮಾಳದಲ್ಲಿ ಕಾಣಿಸಿಕೊಂಡ ಅಗ್ನಿ
12/02/2024, 13:45
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸೀತಾಳಯ್ಯನಗಿರಿ ಸಮೀಪ ಗುಡ್ಡ ಹೊತ್ತಿ ಉರಿದಿದೆ.
ಸೀತಾಳಯ್ಯನಗಿರಿ ಸಮೀಪದ ಗೋಮಾಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೀತಾಳಯ್ಯನ ಗಿರಿಯು ಮುಳ್ಳಯ್ಯನಗಿರಿ ಸಾಲಿನಲ್ಲಿದೆ.
ಗೋಮಾಳದ ಕೆಲ ಜಾಗದಲ್ಲಿ ಬೆಂಕಿ ಅವರಿಸಿದೆ. ಬೆಟ್ಟ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ.
ಅರಣ್ಯ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ನಿರತರಾಗಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕದ ದಳ ಸಿಬ್ಬಂದಿ ಭೇಟಿ ನೀಡಿದ್ದಾರೆ. ಕೆಲ ಸ್ಥಳಕ್ಕೆ ಅಗ್ನಿ ಶಾಮಕ ದಳ ಹೋಗಲು ಸಾಧ್ಯವಾಗುತ್ತಿಲ್ಲ.