7:35 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪತ್ನಿಯ ಗೋವಾ ಸುತ್ತಿಸಿ ಮನೆಗೆ ಬಂದ ಮರು ದಿನವೇ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ

06/09/2023, 10:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದು ವಾರಗಳ ಕಾಲ ಪತ್ನಿ ಜತೆ ಗೋವಾದಲ್ಲಿ ವಿಹರಿಸಿ ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನು ಭೀಕರವಾಗಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ.
ಮೃತಳನ್ನು ಶಮಾಭಾನು(34) ಎಂದು ಗುರುತಿಸಲಾಗಿದೆ. ಪತ್ನಿ ಹಂತಕ ಪತಿ ಶಬ್ಬರ್ ಅಹಮದ್ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿ ಶಬ್ಬೀರ್ ಅಹಮದ್ ತನ್ನ ಪತ್ನಿ ಶಮಾಭಾನು ಜತೆ ಗೋವಾ ಪ್ರವಾಸ ಹೋಗಿದ್ದನು. ಒಂದು ವಾರಗಳ ಕಾಲ ಗೋವಾದಲ್ಲಿ ಪ್ರವಾಸ ಮುಗಿಸಿ ಬಂದ ಮರುದಿನವೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿದ್ದಾನೆ. ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ. ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನು ಮದುವೆಯಾಗಿದ್ದನು. ಇದೀಗ, ಆಕೆಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು