ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ, ಆಸ್ಪತ್ರೆಗೆ ದಾಖಲು
23/02/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. 8 ವರ್ಷದ ಮುಜಾಮಿಲ್ ಎಂಬ ಬಾಲಕ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ. ಬಾಲಕನ ಮೇಲೆ ನಾಯಿ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಾಯಿ ದಾಳಿಯಿಂದ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ತಕ್ಷಣವೇ ಸ್ಥಳೀಯರು ಬಾಲಕನ ರಕ್ಷಣೆ ಮಾಡಿದ್ದಾರೆ.
ಬಾಲಕನಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.