ಇತ್ತೀಚಿನ ಸುದ್ದಿ
ಚಿಕ್ಕೋಡಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ: ನದಿ ತೀರಕ್ಕೆ ಎನ್ ಡಿಆರ್ ಎಫ್ ತಂಡ ನಿಯೋಜನೆ
10/06/2021, 08:03

ಬೆಳಗಾವಿ(reporterkarnataka news): ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್ ತಂಡ ನಿಯೋಜಿಸಲಾಗಿದೆ.
ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ 21 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.
ಯಡೂರ ಗ್ರಾಮಕ್ಕೆ ಈ ಎನ್ ಡಿ ಆರ್‌ಎಫ್‌ತಂಡ ಆಗಮಿಸಿದೆ. ಇಲ್ಲಿಯ ಸಿದ್ಧ ತೀರ್ಥಯಾತ್ರಿ ನಿವಾಸದಲ್ಲಿ ಬೀಡುಬಿಟ್ಟಿದ್ದಾರೆ.
ಕೊಂಕಣ ಪ್ರದೇಶಗಳಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಿದೆ.