1:01 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ

17/05/2026, 18:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದೇವನಗುಲ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಪರಿಚಿತ ವೃದ್ಧನ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 65ರಿಂದ 70 ವರ್ಷ ವಯಸ್ಸಿನ ವ್ಯಕ್ತಿಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಾಹಿತಿಯಂತೆ, ಕಳೆದ ಕೆಲವು ದಿನಗಳಿಂದ ವೃದ್ಧ ವ್ಯಕ್ತಿ ರಸ್ತೆ ಬದಿಯ ಅಂಗಡಿಗಳ ಸುತ್ತಮುತ್ತ ತಿರುಗಾಡುತ್ತಿದ್ದು, ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಊರಿನ ಬಗ್ಗೆ ವಿಚಾರಿಸಿದಾಗ “ಮಂಡ್ಯ” ಎಂದು ಹೇಳುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಕಾರಣ ಯಾರೂ ಹೆಚ್ಚಿನ ಗಮನ ಹರಿಸಿರಲಿಲ್ಲ ಎಂದು ತಿಳಿದು ಬಂದಿದೆ.
ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ಪ್ರದೇಶದ ಬಳಿ ನಡೆಯುತ್ತಿದ್ದ ಬೇಲಿ ಕಾಮಗಾರಿಯ ವೇಳೆ ಕಾರ್ಮಿಕರು ಅರಣ್ಯದೊಳಗೆ ಶವ ಕಂಡು ತಕ್ಷಣವೇ ಬಣಕಲ್ ಪೊಲೀಸ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ದಿಲೀಪ್ ಕುಮಾರ್ ಮೃತದೇಹವನ್ನು ಪರಿಶೀಲಿಸಿದ್ದು, ದೇಹದ ಮೇಲೆ ಯಾವುದೇ ಗಾಯ ಅಥವಾ ಅನುಮಾನಾಸ್ಪದ ಗುರುತುಗಳು ಕಾಣಿಸಿಲ್ಲ ಎಂದು ತಿಳಿಸಿದ್ದಾರೆ.
ಬಳಿಕ ಸಮಾಜಸೇವಕ ಆರಿಫ್ ಅವರ ಆಂಬುಲೆನ್ಸ್ ಮೂಲಕ ಶವವನ್ನು ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಜೊತೆಗೆ ಮೃತನ ಗುರುತು ಪತ್ತೆ ಕಾರ್ಯವೂ ನಡೆಯುತ್ತಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತ ವ್ಯಕ್ತಿಯ ಕುಟುಂಬದವರ ಮಾಹಿತಿ ಸಂಗ್ರಹಿಸಲು ಹಾಗೂ ಸಾವಿನ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು