ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮಹಾ ಮಳೆಗೆ ಹಳಿಗೆ ಹಾನಿ; ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ
23/10/2025, 13:48

info.reporterkarnataka@gmail.com
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದುವರಿದ ಭಾರೀ ಮಹಾಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಭಾರೀ ದುರಂತ ತಪ್ಪಿದೆ.
ರಾತ್ರಿ ಸುರಿದ ಧಾರಾಕಾರ ಮಳೆಗೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದ ಬಳಿ ರೈಲ್ವೆ ಹಳಿ ಕೊಚ್ಚಿ ಹೋಗಿದೆ. ರೈಲ್ವೆ ಹಳಿಯ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿ, ಹಳಿಗಳ ಬುಡದ ಅಡಿಪಾಯ ತಪ್ಪಿದೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಪ್ಯಾಸೆಂಜರ್ ರೈಲು ಹೊರಟಿತ್ತು. ಕಣಿವೆ ರೈಲ್ವೆ ಸ್ಟೇಷನ್ ಸಿಬ್ಬಂದಿಗಳಿಂದ ರೈಲು ಚಾಲಕನಿಗೆ ಮಾಹಿತಿ ನೀಡಲಾಯಿತು.
ಚಲಿಸುತ್ತಿದ್ದ ರೈಲನ್ನ ತಕ್ಷಣವೇ ಚಾಲಕ ನಿಲ್ಲಿಸಿದ್ದರು. ನಂತರ ಸಿಬ್ಬಂದಿಗಳು ಹಳಿ ದುರಸ್ತಿಪಡಿಸಿದರು. 30 ನಿಮಿಷ ರೈಲು ನಿಂತಿತ್ತು.
ಬೆಳಗ್ಗೆ 7.10ಕ್ಕೆ ಚಿಕ್ಕಮಗಳೂರು ನಗರದಿಂದ ರೈಲು ಹೊರಟಿತ್ತು. ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೊಗಿತ್ತು.