ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ
26/03/2024, 17:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಸಾವನ್ನಪ್ಪಿದವರ ಸಂಖ್ಯೆ 4ಕ್ಕೇರಿದೆ. ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚಾಗುತ್ತಿದೆ. ಕೊಪ್ಪ , ಎನ್. ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಕೆಎಫ್ ಡಿ ಸೋಂಕು ಹೆಚ್ಚುತ್ತಿದೆ.
ಆಸ್ಪತ್ರೆಯಲ್ಲಿ 11 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.