10:48 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

20ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ : ಬೆಂಗಳೂರಲ್ಲಿ ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್

01/05/2026, 14:31

ಬೆಂಗಳೂರು(reporterkarnataka.com): ಬೆಂಗಳೂರಲ್ಲಿ ಮಹಿಳೆಯ ಜೊತೆ ರಾಸಲೀಲೆ ವಿಡಿಯೋ ಇಟ್ಟುಕೊಂಡು ಕಾಮುಕನೊಬ್ಬ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಆರ್ ಆರ್ ನಗರ ಪೊಲೀಸ್ರಿಂದ ಆರೋಪಿ ಚಂದ್ರೇಗೌಡನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಚಂದ್ರೇಗೌಡ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನಾಗಿದ್ದು, ನಾನು ಪೊಲೀಸ್, ರಿಪೋರ್ಟರ್, ವಕೀಲ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಅಲ್ಲದೇ ಹಲವು ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಚಂದ್ರೆಗೌಡ ನನಗೆ ಡಿವೋರ್ಸ್ ಆಗಿದ್ದು ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾನೆ. ಅಲ್ಲದೆ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಹಾಗೆಯೇ ಜೊತೆಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ.
ಆ ವೇಳೆ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲೆ ಮಾಡಿದ್ದಾನೆ ನಂತರ ಬೆದರಿಕೆ ಒಡ್ಡಿ 5 ಲಕ್ಷ ಹಣವನ್ನು ಕೂಡ ಚಂದ್ರೇಗೌಡ ಪಡೆದುಕೊಂಡಿದ್ದಾನೆ. ಸದ್ಯ ಪೊಲೀಸರು ಕಿರಾತಕನನ್ನು ಅರೆಸ್ಟ್ ಮಾಡಿದ್ದಾರೆ. ಚಂದ್ರೇಗೌಡನ ಮೊಬೈಲ್ ನಲ್ಲಿ ರಾಸಲೀಲೆ ವಿಡಿಯೋಗಳು ಇದ್ದು ಸುಮಾರು 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿದ್ದ ವಿಡಿಯೋಗಳು ಪತ್ತೆಯಾಗಿವೆ. ಚಂದ್ರೇಗೌಡನ ಕಾಮಕಾಂಡ ಪತ್ತೆಹಚ್ಚಿದ ದೂರುದಾರ ಮಹಿಳೆ ಬಳಿಕ ಆರ್ ಆರ್ ನಗರ ಪೊಲೀಸ್ ರಿಗೆ ದೂರು ನೀಡಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು