8:22 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಚೀನಾದಲ್ಲಿ ಭಾರೀ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.8 ದಾಖಲು; ಮೃತರ ಸಂಖ್ಯೆ 65ಕ್ಕೆ ಏರಿಕೆ

06/09/2022, 23:14

ಬೀಜಿಂಗ್‌(reporterkarnataka.com): ಟಿಬೆಟ್‌ ಸಮೀಪದ ಚೀನಾದ ಸಿಚುವಾನ್‌ ಪ್ರಾಂತ್ಯದಲ್ಲಿ ಸೋಮವಾರ ಸಂಭವಿಸಿದ 6.8ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 65ಕ್ಕೆ ಏರಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ಸಿಚುವಾನ್‌ ಪ್ರಾಂತ್ಯದ ಲುಡಿಂಗ್‌ ಕೌಂಟಿಯ ಮುಖ್ಯ ಪಟ್ಟಣದಲ್ಲಿ ಸಂಭವಿಸಿದ ಭೂಕಂಪನದ ಬಳಿಕ ಕನಿಷ್ಠ 16 ಮಂದಿ ನಾಪತ್ತೆಯಾಗಿದ್ದಾರೆ. ಟಿಬೆಟಿಯನ್ ಸ್ವಾಯತ್ತ ಪ್ರಾಂತ್ಯ ಗಾರ್ಜ್‌ನ ಐತಿಹಾಸಿಕ ಪಟ್ಟಣ ಮೋಕ್ಸಿಯಲ್ಲಿ 37 ಮಂದಿ ಮತ್ತು ಶಿಮಿಯಾನ್‌ ಕೌಂಟಿ ಪ್ರದೇಶದಲ್ಲಿ 28 ಮಂದಿ ಮೃತಪಟ್ಟಿದ್ದಾರೆ. ಭೂಕಂಪನದ ಪರಿಣಾಮ ಪರ್ವತ ಪ್ರದೇಶಗಳಿಂದ ಬಂಡೆಗಳು ಬಿದ್ದು ಸಾಕಷ್ಟು ಮನೆಗಳು ಹಾನಿಗೊಳಗಾಗಿವೆ, ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

50 ಸಾವಿರ ಜನರ ಸ್ಥಳಾಂತರ: ಭೂಕಂಪನದ ಪರಿಣಾಮ ಮನೆಗಳನ್ನು ಕಳೆದುಕೊಂಡ 50,000 ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಚರಣೆಯಲ್ಲಿ 6,500 ಜನರು, ನಾಲ್ಕು ಹೆಲಿಕಾಪ್ಟರ್‌ ಮತ್ತು ಎರಡು ಮಾನವ ರಹಿತ ವೈಮಾನಿಕ ವಾಹನಗಳನ್ನು ನಿಯೋಜಿಸಲಾಗಿದೆ.

ಲಾಕ್‌ಡೌನ್‌ ಮುಂದುವರಿಕೆ: ಭೂಕಂಪನದ ತೀವ್ರತೆಯ ಪರಿಣಾಮ 200 ಕಿ.ಮೀ.ದೂರದ ಚೆಂಗ್‌ಡು ನಗರದಲ್ಲೂ ಕಟ್ಟಡಗಳು ಅಲುಗಾಡಿದ್ದವು. ಆದಾಗ್ಯೂ 2.1 ಕೋಟಿ ಜನಸಂಖ್ಯೆ ಇರುವ ಈ ನಗರದಲ್ಲಿ ಕಠಿಣ ಕೋವಿಡ್‌ ಲಾಕ್‌ಡೌನ್ ಮುಂದುವರಿಸಲಾಗಿದೆ. ಜನರು ಮನೆಯಿಂದ ಹೊರಬರದಂತೆ  ಅಧಿಕಾರಿಗಳು ನಿರ್ಬಂಧಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು