9:33 PM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೊಳ್ಳೆಗಳ ಹಾವಳಿ: ಸ್ವಚ್ಛತೆಗೆ ಮನವಿ

21/09/2024, 21:09

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತೆಯ ಕೊರತೆಯಿಂದ ಸೊಳ್ಳೆಗಳು ವಿಪರೀತವಾಗಿದ್ದು ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಪರಿಸರ ಸ್ವಚ್ಛತೆ ಮಾಡಿ, ಔಷಧಿ ಸಿಂಪಡಿಸುವ ಮೂಲಕ ಆರೋಗ್ಯ ಕಾಪಾಡಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ವಕೀಲರು ಮತ್ತು ಒಂದೂವರೆ ಸಾವಿರಕ್ಕೂ ಅಧಿಕ ಸಾರ್ವಜನಿಕರು ಎಂದರೆ ವಯೋವೃದ್ಧರು, ಮಹಿಳೆಯರು, ಯುವಕರು ಪೋಷಕರೊಂದಿಗೆ ಪುಟಾಣಿ ಮಕ್ಕಳು ನ್ಯಾಯಾಲಯಕ್ಕೆ ಆಗಮಿಸುತ್ತಾರೆ. ಇತ್ತಿಚೆಗೆ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತೆ ಸಂಪೂರ್ಣ ಮರೀಚಿಕೆಯಾಗಿದ್ದು, ಸೊಳ್ಳೆಗಳ ಕಾಟ ವಿಪರೀತ ಹೆಚ್ಚಾಗಿದೆ.
ಸೊಳ್ಳೆಗಳು ಕೇವಲ ಆವರಣದಲ್ಲಷ್ಟೇ ಅಲ್ಲದೆ ನ್ಯಾಯಾಲಯ ಒಳಗಡೆಯೂ ಕಾಟಕೊಡುತ್ತಿದ್ದು ಹಿರಿಯ ವಕೀಲರು ಸೇರಿಂದತೆ ಎಲ್ಲರೂ ರೋಸಿ ಹೋಗಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘವು ತಮಗೆ ಅನೇಕ ಬಾರಿ ಮನವಿ ಮಾಡಿದ್ದು, ಇದೀಗ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಮನವಿ ಮಾಡುವುದೇನೆಂದರೆ, ಚಿತ್ರದುರ್ಗ ನಗರದ ಪೌರಸಿಬ್ಬಂದಿಗಳು ನಿತ್ಯ ನಗರದ ವಿವಿಧ ರಸ್ತೆ ಮತ್ತು ಚರಂಡಿ ಸ್ವಚ್ಛತೆ ಮಾಡುವಂತೆ ವಾರಕ್ಕೆ ಎರಡುದಿನ ಸೊಳ್ಳೆಗಳ ನಾಶಮಾಡಲು ಮತ್ತು ಸಾಂಕ್ರಾಮಿಕ ರೋಗ ತಡೆಯಲು ನ್ಯಾಯಾಲಯದ ಆವರಣದ ಪರಿಸರ ಸ್ವಚ್ಛತೆ ಮಾಡುವುದು ಅಗತ್ಯವಾಗಿದೆ.
ನ್ಯಾಯಾಲಯಕ್ಕೆ ಬರುವ ನಾಗರೀಕರ ಹಿತದೃಷ್ಟಿಯಿಂದ ಆವರಣದೊಳಗಿನ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಮಾಡಿಸಬೇಕೆಂದು ಮತ್ತು ಔಷಧಿ ಸಿಂಪಡಿಸಿ ಸೊಳ್ಳೆಗಳ ನಾಶಪಡಿಸಬೇಕು. ಪ್ರಮುಖವಾಗಿ ಸ್ವಚ್ಛತೆಗಾಗಿ ಇಬ್ಬರು ಪೌರಕಾರ್ಮಿಕರನ್ನು ನಿಯೋಜಿಸುವ ಮೂಲಕ ವಕೀಲರ ಆರೋಗ್ಯ ಮತ್ತು ನಾಗರೀಕರ ಹಿತರಕ್ಷಣೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕೆಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷರಾದ ಡಾ.ಎಂ.ಸಿ.ನರಹರಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು