5:23 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಚಿತ್ರ ನಟ ಯಶ್ ಹುಟ್ಟುಹಬ್ಬದ ಕಟೌಟ್ ಅಳವಡಿಸುವ ವೇಳೆ ವಿದ್ಯುತ್ ಅವಘಢ: 3 ಮಂದಿ ಯುವಕರು ದಾರುಣ ಸಾವು

08/01/2024, 16:03

ಗದಗ(reporterkarnataka.com): ಕೆಜಿಎಫ್ ಖ್ಯಾತಿಯ ನಟ ಯಶ್ ಅವರ ಬರ್ತಡೇಗೆ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದು ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ಹನುಮಂತ, ಮುರಳಿ ನಡುವಿನಮನಿ ಮತ್ತು ನವೀನ ಗಾಜಿ ಎಂದು ಗುರುತಿಸಲಾಗಿದೆ. ಇವರೆಲ್ಲ 19ರಿಂದ 21 ವರ್ಷದೊಳಗಿನ ತರುಣರು ಆಗಿದ್ದಾರೆ. ಇದೇ ವೇಳೆ ಇನ್ನೂ ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಲಾಗಿದೆ.
ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಅಂಬೇಡ್ಕರ್ ನಗರದ ಯಶ್ ಅಭಿಮಾನಿಗಳು ಭಾನುವಾರ ರಾತ್ರಿ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವುದಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಕಟೌಟ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಯುವಕರ ಹಠಾತ್ ಸಾವಿನಿಂದಾಗಿ ಸೂರಣಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಡಾ. ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು