1:43 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: 3 ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ

23/11/2025, 20:17

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗದಲ್ಲಿ ಮೂರು ದಿನಗಳ ಯುವ ರೆಡ್ ಕ್ರಾಸ್ ಬೆಂಗಳೂರು ವಿಭಾಗೀಯ ಮಟ್ಟದ ಶಿಬಿರ ಉದ್ಘಾಟನೆಗೊಂಡಿತು.
ಈ ಶಿಬಿರದಲ್ಲಿ ಬೆಂಗಳೂರು ವಿಭಾಗದ 150 ವಿದ್ಯಾರ್ಥಿಗಳು/ ವಿವಿಧ ಕಾಲೇಜುಗಳ ಯುವ ರೆಡ್ ಕ್ರಾಸ್ ಸ್ವಯಂಸೇವಕರು ಭಾಗವಹಿಸುತ್ತಿದ್ದಾರೆ.

ಶಿಬಿರದ ಉದ್ಘಾಟನೆಯನ್ನು ಪ್ರೊ. ವೆಂಕಟೇಶ್ ಕೆ , ಮುಖ್ಯ ಅತಿಥಿಯಾಗಿ ಮೀರಾ ಶಿವಲಿಂಗಯ್ಯ, ಡಾ. ಪ್ರಿಯಾ ಪುರಾಣಿಕ, ಎಂ.ಕೆ. ಅನಂತ ರೆಡ್ಡಿ, ಆಗಮಿಸಿ ನೆರವೇರಿಸಿದರು. ಅವರು ಯುವ ರೆಡ್ ಕ್ರಾಸ್ ಸ್ವಯಂಸೇವಕರಿಗೆ ಸಮಾಜಸೇವೆ, ಮಾನವೀಯತೆ ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ಬೆಳೆಸಿಕೊಳ್ಳುವ ಬಗ್ಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಬಸ್ರೂರು ರಾಜೀವ್ ಶೆಟ್ಟಿ (ಸಭಾಪತಿಗಳು ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ) ಅಧ್ಯಕ್ಷತೆ ವಹಿಸಿದ್ದರು. ಇತರೆ ರೆಡ್ ಕ್ರಾಸ್‌ನ ಗಣ್ಯರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಪ್ರಥಮ ಚಿಕಿತ್ಸೆ, ದಾನಧರ್ಮ, ವಿಪತ್ತು ನಿರ್ವಹಣೆ, ಆರೋಗ್ಯ ಜಾಗೃತಿ, ರಸ್ತೆ ಸುರಕ್ಷತೆ, ರಕ್ತದಾನದ ಮಹತ್ವ, artificial intelligence and advance technology, career guidance ನಾಯಕತ್ವಾಭಿವೃದ್ಧಿ ಹಾಗೂ ಮಾನವೀಯ ಮೌಲ್ಯಗಳ ಕುರಿತು ವಿವಿಧ ತರಗತಿಗಳು, practically ಯೋಗಾಭ್ಯಾಸ ಮತ್ತು ಸಂವಹನಾತ್ಮಕ ಅಧಿವೇಶನಗಳು ನಡೆಯಲಿವೆ.
ಡಾ. ಗಣನಾಥ ಶೆಟ್ಟಿ ಎಕ್ಕಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ರೆಡ್ ಕ್ರಾಸ್ ತಂಡ, ಅಧಿಕಾರಿಗಳು, ಹಾಗೂ ಯುವ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲು ತಮ್ಮ ಸಂಪೂರ್ಣ ಸಹಕಾರವನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು