9:16 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ರಿಸರ್ವ್‌ ಪೊಲೀಸ್‌‍ ಸಬ್‌ ಇನ್‌ಸ್ಪೆಕ್ಟರ್‌ಗಳ ದುರ್ಮರಣ

15/03/2026, 15:57

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ರಿಸರ್ವ್‌ ಪೊಲೀಸ್‌‍ ಸಬ್‌ಇನ್ಸ್ ಪೆಕ್ಟರ್‌ಗಳು (ಆರ್‌ಎಸ್‌‍ಐ) ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣೆಕೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಾರಟಗಿ ಮೂಲದ ಮಂಜುನಾಥ್‌ ದಾರಿಮಣಿ (32), ರಾಯಚೂರಿನ ಅಂಬರೀಶ್‌ ಹಾಗೂ ತೀರ್ಥಳ್ಳಿಯ ಸಚ್ಚಿನ್‌ ಮೃತಪಟ್ಟ ದುರ್ದೈವಿಗಳು. ಬೆಂಗಳೂರಿನಲ್ಲಿ ರಿಸರ್ವ್‌ ಪೊಲೀಸ್‌‍ ಇಲಾಖೆಯಲ್ಲಿ ಸಬ್‌ಇನ್‌್ಸಪೆಕ್ಟರ್‌ಗಳಾಗಿ ಮೂವರು ಸೇವೆ ಸಲ್ಲಿಸುತ್ತಿದ್ದು, ಮದುವೆಗೆಂದು ಬಳ್ಳಾರಿಗೆ ಕಾರಿನಲ್ಲಿ ಐವರು ತೆರಳುತ್ತಿದ್ದಾಗ ಮುಂಜಾನೆ 7.50 ರ ಸುಮಾರಿನಲ್ಲಿ ಶ್ರೀರಂಗಪಟ್ಟಣ ಬೀದರ್‌ ರಾಷ್ಟ್ರೀಯ ಹೆದ್ದಾರಿಯ ಸಾಣೆಕೆರೆ ಗೇಟ್‌ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಈ ದುರಂತ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಈಶ್ವರ್‌ ಹಾಗೂ ಮಹಾಂತೇಶ್‌ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಕೆಳಗಡೆ ಕಾರು ಸಿಲುಕಿಕೊಂಡಿದ್ದು, ಸುಮಾರು ದೂರ ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸುದ್ದಿ ತಿಳಿದ ಕೂಡಲೇ ಚಳ್ಳಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು