5:08 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಚಿತ್ರದುರ್ಗ | ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

09/08/2026, 18:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳು ಚೌಳೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತಮ್ಮ ನೆಚ್ಚಿನ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ಸಾಂಗವಾಗಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರಾದ ಡಿ. ಟಿ. ಹನುಮಂತರಾಯ ಅವರು ನಾವು ನೀಡಿದ ವಿದ್ಯೆಯಿಂದ ಎಷ್ಟೋ ವಿದ್ಯಾರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉನ್ನತವಾದ ಜೀವನ ರೂಪಿಸಿಕೊಂಡಿದ್ದರೆಂದು ಸಂತೋಷ ವ್ಯಕ್ತಪಡಿಸಿದರು. ಹಾಗೆ ಮುಂದುವರೆಸುತ್ತ ಇಷ್ಟು ವರ್ಷಗಲ್ಲಿ 2001-02ನೇ ಸಾಲಿನ ವಿದ್ಯಾರ್ಥಿಗಳು ಮಾಡಿದ ಸನ್ಮಾನ ನೆನೆದು ಧನ್ಯವಾದಗಳನ್ನು ಅರ್ಪಿಸಿದರು. ಇದೇ ಸಂದರ್ಭದಲ್ಲಿ 2001-02ನೇ ಸಾಲಿನ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು