7:57 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ನ.24ರಂದು ಮಹಿಳಾ ದಿನ, ಮ್ಯಾರಥಾನ್ ಓಟ

23/11/2021, 19:04

ಗೋಪಾನಹಳ್ಖಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ ಮಹಿಳಾ ದಿನ ಹಾಗೂ ವಿವಿಧ ಮಹಿಳಾ ಸಂಘಟನೆಗಳಿಂದ ಮ್ಯಾರಥಾನ್ ಓಟ ಕಾರ್ಯಕ್ರಮವನ್ನು ನವೆಂಬರ್ 24ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾನಾಯ್ಕ್, ಚಿತ್ರ ಡಾನ್‍ಬೋಸ್ಕೊ ಸಂಸ್ಥೆ ನಿರ್ದೇಶಕ ಫಾದರ್ ಜೋಸೆಪ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ವಿವಿಧ ಮಹಿಳಾ ಸಂಘಟನೆಗಳಿಂದ ಮ್ಯಾರಾಥಾನ್ ಓಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪ್ರಾರಂಭಿಸಿ ಮದಕರಿ ನಾಯಕ ವೃತ್ತ, ಹಳೇ ವೈಶಾಲಿ ವೃತ್ತದಿಂದ ಸ್ಟೇಡಿಯಂ ಹತ್ತಿರವಿರುವ ಬಾಲಭವನ ಆವರಣದವರೆಗೆ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು