6:42 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿತ್ರಾಪುರ: ಗಾಂಜಾ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ; ಆಟೋ ಚಾಲಕ ಗಂಭೀರ ಗಾಯ

27/02/2023, 10:16

ಮಂಗಳೂರು(reporterkarnataka.com): ನಗರದ ಹೊರವಲಯದ ಚಿತ್ರಾಪುರ ಸಮೀಪದ
ಗಾಂಜಾ ಸೇವಿಸಿದ ಇಬ್ಬರು ದುಷ್ಕರ್ಮಿಗಳು ಆಟೋ ಚಾಲಕರ ಮೇಲೆ ತಲವಾರಿನಿಂದ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

ಪಣಂಬೂರು ಮೊಗವೀರ ಮಹಾಸಭಾ ವ್ಯಾಪ್ತಿಯ ಕಡಲತೀರದಲ್ಲಿ ಈ ಘಟನೆ ನಡೆದಿದ್ದು, ತಲವಾರು ದಾಳಿಯಿಂದ ಗಂಭೀರ ಗಾಯಗೊಂಡ ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಲ್ಕೊರೆತ ತಡೆಯಲು ಹಾಕಿರುವ ಬಂಡೆಗಳ ಮೇಲೆ ಗಾಂಜಾ ಸೇದುವುದು, ಮಾರಾಟ ಮಾಡುವುದು ಹಾಗೂ ಅಕ್ರಮ ನಡೆಸುವುದು ನಡೆಯುತ್ತಿತ್ತು. ಇಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಸದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು. ಇದೇ ದ್ವೇಷದಿಂದ ಚಾಲಕನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಸ್ಥಳೀಯ ಮುಖ್ಯಸ್ಥರಾದ ಮಾಧವ ಸುವರ್ಣ ಅವರಿಗೂ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳು ತಲವಾರು ಬೀಸಿದಾಗ ಸ್ಥಳದಲ್ಲಿದ್ದ ಹೆಚ್ಚಿನವರು ಓಡಿ ಹೋಗಿದ್ದಾರೆ. ಒಬ್ಬನನ್ನು ಸ್ಥಳೀಯರು ಹಿಡಿದರೆ, ಮತ್ತೊಬ್ಬ ಪರಾರಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು