3:34 PM Friday4 - April 2025
ಬ್ರೇಕಿಂಗ್ ನ್ಯೂಸ್
Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ

ಇತ್ತೀಚಿನ ಸುದ್ದಿ

ಸೆ.29: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನದಲ್ಲಿ ಕೋಟಿ ಗಾಯತ್ರಿ ಜಪಯಜ್ಞ ಸಂಕಲ್ಪ ದಿನ

26/09/2024, 23:32

ಮಂಗಳೂರು(reporterkarnataka.com): ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಕೇಂದ್ರ ಸಮಿತಿ ಹಾಗೂ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಜಂಟಿಯಾಗಿ ಮಂಗಳೂರಿನ ಚಿತ್ರಾಪುರ ಮಠದ ಸಹಕಾರದೊಂದಿಗೆ ಅ. 26 ಮತು 27ರಂದು ನಡೆಸಲು ಉದ್ದೇಶಿಸಿದ ಗಾಯತ್ರಿ ಸಂಗಮ ಸಾಂಘಿಕ ಕೋಟಿ ಗಾಯತ್ರೀ ಜಪಯಜ್ಞದ ಪೂರ್ವಾಭಾವಿಯಾಗಿ ಸೆ. 29ನೇ ಭಾನುವಾರ ಬೆಳಗ್ಗೆ 10.00 ಗಂಟೆಗೆ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನದಲ್ಲಿ ಸಂಕಲ್ಪ ದಿನ ಆಯೋಜಿಸಲಾಗಿದೆ.
ಇದೇ ವೇಳೆ ಮಾತೆಯರು ಸರ್ವಮಂಗಳ ಮಾಂಗಲ್ಯ ಸ್ತೋತ್ರ ಪಠಣ ಸಂಕಲ್ಪ ಮಾಡಲಿದ್ದಾರೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬ್ರಾಹ್ಮಣ ಸಮುದಾಯದ ಎಲ್ಲ ಜ್ಞಾನಿಗಳು, ವಿದ್ವಾಂಸರು, ವಿಪ್ರರು, ಮುಂದಾಳುಗಳು, ಹಿರಿಯರು, ಯುವ ಸಮುದಾಯ, ಮಕ್ಕಳು, ಮಹಿಳೆಯರು ಹೀಗೆ ಎಲ್ಲರೂ ಸೇರಿ ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮತೇಜದ ಬೆಳಕಲಿ ಎಂಬ ಸದಾಶಯದೊಂದಿಗೆ ಕಡಲ ಕಿನಾರೆ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಕೋಟಿ ಗಾಯತ್ರಿ ಜಪಯಜ್ಞ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪೂರ್ವಭಾವಿಯಾಗಿ ನಡೆಯುವ ಸಂಕಲ್ಪ ದಿನದಂದು ರಾಜ್ಯ ಧಾರ್ಮಿಕ ಪರಿಷತ್‌ನ ಮಾಜಿ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಆಶಯ ಭಾಷಣ ಮಾಡಲಿದ್ದಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ನ್ಯಾಯವಾದಿ ಮಹೇಶ್ ಕಜೆ ಅವರು ಮಹಾಸಭಾದ ಧ್ಯೇಯ ಉದ್ದೇಶಗಳನ್ನು ಜನರಿಗೆ ತಿಳಿಸಲಿದ್ದಾರೆ.
ಯಾಗ ಸಮಿತಿಯ ಸಂಚಾಲಕ ಕಟೀಲಿನ ಅನುವಂಶಿಕ ಅರ್ಚಕ ಶ್ರೀಹರಿ ನಾರಾಯಣ ದಾಸ ಆಸ್ರಣ್ಣ ಅವರು ಯಜ್ಞದ ಬಗ್ಗೆ ಮಾಹಿತಿ ನೀಡಲಿರುವರು.
ಶರವು ಕ್ಷೇತ್ರದ ಶಿಲೆಶಿಲೆ ಆಡಳಿತ ಮೊಕ್ತೇಸರ ಶರವು ಶ್ರೀ ರಾಘವೇಂದ್ರ ಶಾಸ್ತ್ರಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಆಡಳಿತ ಮೊಕ್ತೇಸರ ವೇ.ಮೂ. ವಾಸುದೇವ ಆಸ್ರಣ್ಣರು, ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳು,ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ಕರ್ನಾಟಕ ಬ್ಯಾಂಕಿನ ನಿಕಟ ಪೂರ್ವ ಅಧ್ಯಕ್ಷರಾದ ಎಂ.ಎಸ್. ಮಹಾಬಲೇಶ್ವರ ಭಟ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ವೇದಮೂರ್ತಿ ಕೃಷ್ಣ ಭಟ್ ಪಾವಂಜೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಾಲಯದ ಅರ್ಚಕರು, ಜಿಲ್ಲೆಯ ಎಲ್ಲ ಪುರೋಹಿತರು, ಸಹಾಯಕ ಪುರೋಹಿತರು, ಸಂಸ್ಕೃತ ಶಿರೋಮಣಿಗಳು, ವೇದಜ್ಞರು ಭಾಗವಹಿಸಲಿರುವರು.
ಕೋಟಿ ಗಾಯತ್ರಿ ಜಪಯಜ್ಞ ಯಶಸ್ವಿಗಾಗಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಬ್ರಾಹ್ಮಣ ಸಮುದಾಯ ಸಂಕಲ್ಪ ಮಾಡಿ ಜಪ ಆರಂಭಿಸಿರುತ್ತಾರೆ. ಯಶಸ್ವಿಗಾಗಿ ಹಲವು ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು